ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದ ಟ್ಯಾಂಕರ್ ಲಾರಿ ಕಸ್ಟಡಿಗೆ: ಮದ್ಯದಮಲಿನಲ್ಲಿದ್ದ ಚಾಲಕನ ಬಂಧನ
ಕುಂಬಳೆ: ಚಾಲಕನಿಗೆ ಮದ್ಯದ ಅಮಲು ನೆತ್ತಿಗೇರಿದುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಸಂಚರಿಸುತ್ತಿದ್ದ ಟ್ಯಾಂಕರ್ ಲಾರಿಯನ್ನು ಹೈವೇ ಪಟ್ರೋಲಿಂಗ್ ಅಧಿಕಾರಿಗಳು ವಶಕ್ಕೆ ತೆಗೆದು ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ. ವಿಷಯ ತಿಳಿದು ತಲುಪಿದ ಕುಂಬಳೆ ಪೊಲೀಸರು ಲಾರಿ ಚಾಲಕನಾದ ತಮಿಳುನಾಡು ತಂಜಾವೂರು ನಿವಾಸಿ ಬಾಲಸುಬ್ರಹ್ಮಣ್ಯನ್ (48) ಎಂಬಾತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ವೇಳೆ ಈ ಘಟನೆ ನಡೆದಿದೆ. ಮಂಗಳೂರು ಭಾಗದಿಂದ ಕಣ್ಣೂರಿನತ್ತ ಸಂಚರಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸಿದೆ. ಲಾರಿ ಅಪಾಯಕರ ರೀತಿಯಲ್ಲಿ ಸಂಚರಿಸುತ್ತಿರುವ ದೃಷ್ಯ …