ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ: ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರಕಾರ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ 2021ರಲ್ಲಿ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ಹಣ ಹಾಗೂ ಮೊಬೈಲ್ ಫೋನ್ ನೀಡಿ ಅವರ ನಾಮಪತ್ರ ವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆಯೆಂದು ಆರೋಪಿಸಿ ನೀಡಲಾದ ದೂರಿನಂತೆ ಪೊಲೀಸರು ದಾಖಲಿಸಿಕೊಂಡಿದ್ದ ಕೇಸನ್ನು ರದ್ದುಪಡಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿನ ವಿರುದ್ಧ ಕೇರಳ ಸರಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಅಂದು ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ಎರಡು ಲಕ್ಷ ರೂ. ಹಾಗೂ 8,300 ರೂ. ಮೌಲ್ಯದ ಮೊಬೈಲ್ …