ರಾಷ್ಟ್ರೀಯ ಹೆದ್ದಾರಿ ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣ: ಸಮಗ್ರ ತನಿಖೆ ನಡೆಸಬೇಕು- ನ್ಯಾ. ಕೆ. ಶ್ರೀಕಾಂತ್
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರಿಬ್ಬರು ಮೊಗ್ರಾಲ್ ಪುತ್ತೂರು ಬಳಿ ಕ್ರೈನ್‌ನ ಬಕೆಟ್ ತುಂಡಾಗಿ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಆಗ್ರಹಪಟ್ಟಿದ್ದಾರೆ. ನಿರ್ಮಾಣ ಕೆಲಸದಲ್ಲಿ ಕಾರ್ಮಿಕರಿಗೆ ಅಗತ್ಯದ ಸುರಕ್ಷಾ ವ್ಯವಸ್ಥೆ ಏರ್ಪಡಿಸುವಲ್ಲಿ ಗುತ್ತಿಗೆ ಸಂಸ್ಥೆಯ ವತಿಯಿಂದ ನಿರ್ಲಕ್ಷ್ಯ ಉಂಟಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಮಾತ್ರವಲ್ಲ ನಿರ್ಮಾಣ ಕೆಲಸದ ಮೇಲ್ನೋಟ ವಹಿಸುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ …