ಉಪ್ಪಳ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಅನಧಿಕೃತ ನಿಲುಗಡೆ: ಬಸ್ಗಳಿಗೆ, ವ್ಯಾಪಾರಿಗಳಿಗೆ ಸಮಸ್ಯೆ
ಉಪ್ಪಳ: ಉಪ್ಪಳ ಬಸ್ ನಿಲ್ದಾಣಕ್ಕೆ ಖಾಸಗಿ ವಾಹನಗಳು ಪ್ರವೇಶಿಸುತ್ತಿರುವುದು ವಿವಿಧ ಸಮಸ್ಯೆಗಳನ್ನು ಉಂಟು ಮಾಡುತ್ತಿರುವುದಾಗಿ ವ್ಯಾಪಾರಿಗಳು ಹಾಗೂ ಪ್ರಯಾಣಿಕರು ದೂರಿದ್ದಾರೆ. ಪಂಚಾಯತ್ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಉಂಟಾಗಿಲ್ಲವೆಂದು ದೂರಲಾಗಿದೆ. ಬಸ್ ನಿಲ್ದಾಣಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದ್ದರೂ, ಅದನ್ನು ಉಲ್ಲಂಘಿಸಿ ನಿಲ್ದಾಣದಲ್ಲಿ ಖಾಸಗಿ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿದೆ. ವ್ಯಾಪಾರಕ್ಕಾಗಿ ಬರುವ ವ್ಯಕ್ತಿಗಳು ತಮ್ಮ ವಾಹನಗಳನ್ನು ಬಸ್ ನಿಲ್ದಾಣದೊಳಗೆ ಯದ್ವಾತದ್ವ ತಂದು ನಿಲ್ಲಿಸುವುದರಿಂದಾಗಿ ಬಸ್ಗಳಿಗೆ ನಿಲ್ದಾಣ ಪ್ರವೇಶಿಸಲು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ …
Read more “ಉಪ್ಪಳ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಅನಧಿಕೃತ ನಿಲುಗಡೆ: ಬಸ್ಗಳಿಗೆ, ವ್ಯಾಪಾರಿಗಳಿಗೆ ಸಮಸ್ಯೆ”