ವಿಶ್ವ ಸಹೋದರತ್ವ ದಿನ ಪ್ರಯುಕ್ತ ರಕ್ತದಾನ ಶಿಬಿರ
ಕಾಸರಗೋಡು: ವಿಶ್ವ ಸಹೋದರತ್ವ ದಿನದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ಯ ವಿಶ್ವವಿದ್ಯಾಲಯ ಹಾಗೂ ಭಾರತಾಂಬಾ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆ ಬ್ಲಡ್ ಬ್ಯಾಂಕ್‌ನ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಲಾಯಿತು. ಅಣಂಗೂರಿ ನಲ್ಲಿರುವ ಭಾರತಾಂಬಾ ಸೇವಾ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆದ ಶಿಬಿರದಲ್ಲಿ ಜನರಲ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ| ಸೌಮ್ಯ ನಾಯರ್, ಕಾಸರಗೋಡು ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ವಿಜಯ ಲಕ್ಷ್ಮಿ, ಅಣಂಗೂರು ಭಾರತೀಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಯಂತ, ಸೇವಾ ಭಾರತಿಯ …