ಡಾ. ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಕನ್ನಡಭವನ ಉದ್ಘಾಟನೆ ಬಗ್ಗೆ ತೀರ್ಮಾನಿಸಲು ಗಡಿ ಪ್ರಾಧಿಕಾರ ಪದಾಧಿಕಾರಿಗಳಿಂದ ಮುಖ್ಯಮಂತ್ರಿ ಭೇಟಿ: ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಮನವಿ
ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಡಾ. ಕಯ್ಯಾರ ಕಿಂಞಣ್ಣ ರೈಯವರ ಹೆಸರಲ್ಲಿ ಬದಿಯಡ್ಕದಲ್ಲಿ ನಿರ್ಮಿಸಲಾದ ಕನ್ನಡ ಭವನ ಉದ್ಘಾಟನೆಗೆ ಕೇರಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಗಡಿ ಪ್ರಾಧಿಕಾರದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಕಾಸರಗೋಡಿನ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಹಾರ ಕೈಗೊಳ್ಳಲು ಮುಖ್ಯಮಂತ್ರಿಗೆ ಮನವಿ ನೀಡಲಾಯಿತು. ಕಿಂಞಣ್ಣ ರೈಯವರ ಹೆಸರಲ್ಲಿ ಬದಿಯಡ್ಕದಲ್ಲಿ ನಿರ್ಮಿಸಲಾದ ಕನ್ನಡ ಭವನ ಉದ್ಘಾಟನೆ ದಿನಾಂಕ ನಿಗದಿಪಡಿಸಲು ಕರ್ನಾಟಕ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ತಂಡಕ್ಕೆ …