ಲಾರಿ-ಬೈಕ್ ಢಿಕ್ಕಿ ಹೊಡೆದು ಬಿಬಿಎ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ ವರ್ಷ ಬಿಬಿಎ ವಿದ್ಯಾರ್ಥಿಯಾಗಿರುವ ಲುಕ್ಮಾನ್ ಜಿಮ್‌ಗೆ ಹೋಗಿ ಬೈಕ್‌ನಲ್ಲಿ ನಿನ್ನೆ ರಾತ್ರಿ ಮನೆಗೆ ಹಿಂತಿರುಗುತ್ತಿದ್ದ ದಾರಿ ಮಧ್ಯೆ ಪಾಲಕುನ್ನು ಪೇಟೆಗೆ ತಲುಪಿ ದಾಗ ಕಾಸರಗೋಡು ಭಾಗದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಲುಕ್ಮಾನ್‌ನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾ ದರೂ ಪ್ರಾಣ ಉಳಿಸಲು ಸಾಧ್ಯವಾU ಲಿಲ್ಲ. ಬೇಕಲ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮೃತರು ಹೆತ್ತವರ ಹೊರತಾಗಿ ಸಹೋದರ- ಸಹೋದರಿಯರಾದ ನೌಮಾನ್, ಸಫ್ರಾನ್, ಫಾತಿಮಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page