ಕಣ್ಣೂರು: ಕಣ್ಣೂರು ಮಾತಮಂಗಲಂ ಪೆರುಂದಟ್ಟದಲ್ಲಿ ಉಂಟಾದ ಬೈಕ್ ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ಎಳಮರಂ ನಿವಾಸಿ ವಿಜಯನ್ (50), ರತೀಶ್ (40) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ.
ಬೈಕ್ ಸವಾರ ಶ್ರೀತುಲ್ ಎಂಬವರು ಈ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ವಿಜಯನ್ ಮತ್ತು ರತೀಶ್‌ರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.