ಬದಿಯಡ್ಕ: ಬಿಜೆಪಿ ಬದಿಯಡ್ಕ ಪಂಚಾಯತ್ ಕಾರ್ಯಕರ್ತರ ಸಮಾವೇಶ ಹಾಗೂ ರಜತ ಶಂಕರ ಗೌರವಾಭಿನಂದನೆ ಕಾರ್ಯಕ್ರಮ ಅಕ್ಟೋಬರ್ 5 ರಂದು ಬೆಳಗ್ಗೆ 9.30 ರಿಂದ ಬೇಳ ವಿಷ್ಣುಮೂರ್ತಿ ನಗರದ ವಿ.ಎಂ ಸಭಾಂಗಣದಲ್ಲಿ ನಡೆಯಲಿದೆ. 25 ವರ್ಷಗಳ ಕಾಲ ಜನಪ್ರತಿನಿಧಿಯಾಗಿ, ಶಂಕರ ಮೆಂಬರ್ ಎಂದೇ ಪರಿಚಿತರಾಗಿರುವ ಡಿ.ಶಂಕರ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗೌರವಾಭಿನಂದನೆ ಸಲ್ಲಿಸುವರು. ಕಾರ್ಯಕ್ರಮವನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಉದ್ಘಾಟಿಸುವರು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸುವರು. ಕರ್ನಾಟಕದ ನಿಕಟಪೂರ್ವ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ, ಮಂಡಲ, ಪಂಚಾಯತ್ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವರು.
ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬದಿಯಡ್ಕದಲ್ಲಿ ನಡೆಯಿತು.ಜ್ಯೋತಿಷಿ ಕೃಷ್ಣಮೂರ್ತಿ ಪುದುಕೋಳಿ ನಮೋ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್ ಮಾನ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಬಿಡುಗಡೆಗೊಳಿಸಿದರು. ವಿಶ್ವನಾಥ ಪ್ರಭು ಅಧ್ಯಕ್ಷತೆ ವಹಿಸಿದರು. ಪಕ್ಷದ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ನಿಕಟಪೂರ್ವ ಅಧ್ಯಕ್ಷ ಹರೀಶ್ ನಾರಂಪಾಡಿ, ಅಭಿನಂದನಾ ಸಮಿತಿ ಅಧ್ಯಕ್ಷ ಮಹೇಶ್ ವಳಕುಂಜ ಮಾತನಾಡಿದರು. ಡಿ.ಶಂಕರ ಉಪಸ್ಥಿತರಿದ್ದರು. ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ಸ್ವಾಗತಿಸಿ, ಮಾಹಿತಿ ನೀಡಿದರು. ಅಭಿನಂದನಾ ಸಮಿತಿ ಸಂಚಾಲಕ ಮಂಜುನಾಥ ಮಾನ್ಯ ವಂದಿಸಿದರು.
