ಮಂಜೇಶ್ವರ: ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿ ಸಮಾವೇಶ ನಾಳೆ ಸಂಜೆ 6ಗಂಟೆಗೆ ಮಜೀರ್‌ಪಳ್ಳದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಉದ್ಘಾಟಿಸುವರು. ಮಂಜೇಶ್ವರ ಪಂಚಾಯತ್ ಸಮಿತಿ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಮಾಡ ತೀಯಾ ಸಮಾಜ ಭವನದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸುವರು.







