ವರ್ಕಾಡಿ: ಮಜೀರ್ಪಳ್ಳ ಅಗ್ನಿ ಬ್ರಿಗೇಡ್, ಮಂಗಳೂರು ಕೆಎಂಸಿ ಬ್ಲಡ್ ಬ್ಯಾಂಕ್ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಕೋಳ್ಯೂರು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಬ್ರಿಗೇಡ್ ಅಧ್ಯಕ್ಷ ಸೋಮಪ್ಪ ಪಿ. ಅಧ್ಯಕ್ಷತೆ ವಹಿಸಿದರು. ಶಾಸಕ ಎಕೆಎಂ ಅಶ್ರಫ್ ಮುಖ್ಯ ಅತಿಥಿಯಾಗಿದ್ದರು. ನಟ ಅರವಿಂದ ಬೋಳಾರ್ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಮೀಂಜ ಪಂಚಾಯತ್ ಅಧ್ಯಕ್ಷೆ ಸುಂದರಿ ಶೆಟ್ಟಿ, ವರ್ಕಾಡಿ ಪಂ. ಅಧ್ಯಕ್ಷೆ ಭಾರತಿ ಎಸ್, ಬಾಬು ಕುಳೂರು, ನಾರಾಯಣ ತುಂಗ ಉಪಸ್ಥಿತರಿದ್ದರು. ಅಂಗನವಾಡಿ ಸಹಾಯಕಿ ಲಲಿತ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್‌ರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಮಜೀರ್ಪಳ್ಳ ಅಗ್ನಿಬ್ರಿಗೇಡ್‌ನ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಕೋಶಾಧಿಕಾರಿ ಮನೋಜ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ಮನ್ವಿತ್ ವಂದಿಸಿದರು.
