ಕಾಸರಗೋಡು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಭಾರತಾಂಬಾ ಸೇವಾ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಯ ಬ್ಲಡ್‌ಬ್ಯಾಂಕ್‌ನ ಸಹಯೋಗದೊಂದಿಗೆ ರಾಜಯೋಗಿನಿ ದಾದಿ ಪ್ರಕಾಶಮಣಿಜಿ ಅವರ ಸ್ಮರಣಾರ್ಥ ವಿಶ್ವ ಬಂಧುತ್ವ ದಿನದಂಗವಾಗಿ ಬೃಹತ್ ರಕ್ತದಾನ ಅಭಿಯಾನ ಈ ತಿಂಗಳ 24ರಂದು ಬೆಳಿಗ್ಗೆ 9ರಿಂದ ನಡೆಯಲಿದೆ. ಅಣಂಗೂರು ಭಾರತಾಂಬಾ ಸೇವಾ ಪ್ರತಿಷ್ಠಾನ ಕಾರ್ಯಾಲಯದಲ್ಲಿ ಜರಗುವ ರಕ್ತದಾನ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಸಹಕರಿಸಬೇಕೆಂದು ಸಂಬಂಧಪಟ್ಟವರು ವಿನಂತಿಸಿದ್ದಾರೆ.
