ಕುಂಬಳೆ: ಆರಿಕ್ಕಾಡಿ ಕಡವತ್ತ್‌ನ ರೈಲು ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆ ದೇಹದಿಂದ ಬೇರ್ಪಟ್ಟ ಸ್ಥಿತಿಯಲ್ಲಿದ್ದು, ತಲೆ ಪೂರ್ಣವಾಗಿ ಜಜ್ಜಿಹೋಗಿದೆ. ಇಂದು ಮುಂಜಾನೆ ೫ ಗಂಟೆ ವೇಳೆ ರೈಲು ಹಳಿಯಲ್ಲಿ ಮೃತದೇಹ ಕಂಡುಬಂದಿದ್ದು ಈ ಬಗ್ಗೆ ನಾಗರಿಕರು ನೀಡಿದ ಮಾಹಿತಿಯಂತೆ ಕುಂಬಳೆ ಪೊಲೀಸರು ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿಲ್ಲ. ಸುಮಾರು ೩೦ ವರ್ಷ ಪ್ರಾಯ ಅಂದಾಜಿಸಲಾಗುತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿ ನೀಲಿ ಬಣ್ಣದ ಪ್ಯಾಂಟ್ ಹಾಗೂ ಹಸಿರು ಬಣ್ಣದ ಟಿ ಶರ್ಟ್ ಧರಿಸಿದ್ದಾನೆ. ಘಟನೆ ಬಗ್ಗೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.





