ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್‌ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ ತೆರಳುತ್ತಿರುವುದಾಗಿ ತಿಳಿಸಿ ಇವರು ಮಂಗಳವಾರ ಸಂಜೆ ಮನೆಯಿಂದ ಹೊರಟಿದ್ದರು. ರಾತ್ರಿಯಾದರೂ ಹಿಂತಿರುಗದ ಹಿನ್ನೆಲೆಯಲ್ಲಿ ಸಂಬಂಧಿಕರು ಹಲವು ಸ್ಥಳಗಳಲ್ಲಿ ಹುಡುಕಾಟ ನಡೆಸಿದರಾದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಈ ಮಧ್ಯೆ ನಿನ್ನೆ ಬೆಳಿಗ್ಗೆ ಇವರ ಸ್ಕೂಟರ್ ಗುರುಪುರ ಸೇತುವೆಯ ಬಳಿಯಲ್ಲಿ ನಿಲುಗಡೆಗೊಳಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೋಣಾಜೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದ ಮಧ್ಯೆ ಗುರುಪುರ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಇತ್ತೀಚೆಗೆ ಕೆಲಸ ಕಳೆದುಕೊಂಡಿದ್ದ ಅಶ್ರಫ್ ತೀವ್ರ ಆರ್ಥಿಕ ಸಂದಿಗ್ಧತೆಯಲ್ಲಿದ್ದ ರೆನ್ನಲಾಗಿದೆ. ಇದಾಗಿರಬಹುದು ನದಿಗೆ ಹಾರಿ ಆತ್ಮಹತ್ಯೆಗೈಯ್ಯಲು ಕಾರಣವೆಂದು ಶಂಕಿಸಲಾಗುತ್ತಿದೆ.






