ನುಳ್ಳಿಪ್ಪಾಡಿ ಕ್ಷೇತ್ರದಲ್ಲಿ ಬ್ರಹ್ಮಕಲಶಾಭಿಷೇಕ ನಾಳೆ

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಅಷ್ಟಬಂಧ ಲೇಪನ ಬ್ರಹ್ಮಕಲ ಶಾಭಿಷೇಕ ನಾಳೆ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಭಾಗಿತ್ವದಿಂದ ಯಶಸ್ವಿಯಾಗಿದೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನ ಸಂದಣಿ ಕಂಡುಬರುತ್ತಿದೆ.

ಮಕ್ಕಳು, ಮಹಿಳೆಯರ ಸಹಿತ ಜನರು ಕ್ಷೇತ್ರ ವಠಾರದಲ್ಲಿ ವಿವಿಧ ಕಾರ್ಯ ಕ್ರಮಗಳಲ್ಲಿ ಭಾಗ ವಹಿಸುತ್ತಿದ್ದಾರೆ. ಅನ್ನ ಸಂತರ್ಪಣೆಯು ಭರದಿಂದ ನಡೆಯುತ್ತಿದೆ.

You cannot copy contents of this page