ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರ: ಬ್ರಹ್ಮಕಲಶೋತ್ಸವ ಸಮಿತಿ ಸಭೆ

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಬ್ರಹ್ಮಕಲ ಶೋತ್ಸವ ಸಮಿತಿ ಸಭೆ ನಿನ್ನೆ ಕ್ಷೇತ್ರ ಪರಿಸರದಲ್ಲಿ ಜರಗಿತು. ಬ್ರಹ್ಮಕಲಶೊ ತ್ಸವ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣನ್ ಚೆನ್ನಿಕ್ಕೆರೆ ಅಧ್ಯಕ್ಷತೆ ವಹಿಸಿದರು. ಕ್ಷೇತ್ರ ಸಮಿತಿ ಅಧ್ಯಕ್ಷ ಗಣೇಶ್ ಅಮೈ ಮುಂದೆ ನಡೆಯಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ, ಉಪಾಧ್ಯಕ್ಷ ರಾಮನ್ ಚೆನ್ನಿಕೆರೆ, ಮಹಿಳಾ ಸಮಿತಿ ಅಧ್ಯಕ್ಷೆ ಶೋಭಾ ಅರವಿಂದ ನಾಯ್ಕ್, ಶಿಲ್ಪ ವರಪ್ರಸಾದ್ ಮಾತನಾಡಿದರು. ಗುರುಸ್ವಾಮಿಗಳಾದ ಗೋಪಾಲ, ನಾರಾಯಣ, ಮಹಿಳಾ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತರು ಭಾಗವಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸಂಜಯ್ ಕುಮಾರ್ ಸ್ವಾಗತಿಸಿ, ಕಿಶೋರ್ ಕುಮಾರ್ ವಂದಿಸಿದರು. ಕೋಶಾಧಿಕಾರಿ ದೇವದಾಸ್ ನುಳ್ಳಿಪ್ಪಾಡಿ ನಿರೂಪಿಸಿದರು.

RELATED NEWS

You cannot copy contents of this page