ತೂಮಿನಾಡು ದೈವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ

ಮಂಜೇಶ್ವರ: ಕುಂಜತ್ತೂರು ತೂಮಿನಾಡು ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನದಲ್ಲಿ ಬ್ರಹ್ಮಶ್ರೀ ಮುಗೇರ, ಮಹಾಕಾಳಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಎಪ್ರಿಲ್ 2ರಿಂದ 6ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನದಲ್ಲಿ ನಡೆಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಶಿವಕೃಪ ಕುಂಜತ್ತೂರು ಅಧ್ಯಕ್ಷತೆ ವಹಿಸಿದರು.
ಕಾರ್ಯಾಧ್ಯಕ್ಷ ಮೋಹನ್ ಶೆಟ್ಟಿ ತೂಮಿನಾಡು, ಪ್ರಧಾನ ಸಂಚಾಲಕ ಹರೀಶ್ ಶೆಟ್ಟಿ ಮಾಡ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ, ಕೆ.ಕಿಟ್ಟ, ಸದಾಶಿವ ಕಣ್ವತೀರ್ಥ, ಈಶ್ವರ ಮಾಸ್ತರ್ ಕಿದೂರು ಮೊದಲಾದವರು ಉಪಸ್ಥಿತರಿದ್ದರು. ದೇವದಾಸ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

You cannot copy contents of this page