ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನು ಸ್ವಾಮಿ ರಾಧಾಕೃಷ್ಣನ್ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸರಳ ಸಮಾರಂ ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಿ.ಪಿ. ರಾಧಾಕೃಷ್ಣನ್‌ರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ಕೇಂದ್ರ ಸಚಿವರು ಗಳು, ಒಡಿಸಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಜಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ವಿವಿಧ ರಾಜ್ಯಗಳ ರಾಜ್ಯಪಾಲರು, ಎನ್‌ಡಿಎ ಘಟಕ ಪಕ್ಷಗಳ ಹಲವು ನೇತಾರರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಭಾಗವಹಿಸಿದ್ದರು. ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಪ್ ಧನ್ಕರ್ ಕೂಡಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಮಂಗಳವಾರ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿ ಸಿದ್ದ ಸಿ.ಪಿ. ರಾಧಾಕೃಷ್ಣನ್ ವಿರೋಧ ಪಕ್ಷದ ಇಂಡಿಯಾ ಬ್ಲೋಕ್ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿಯವ ರನ್ನು 152 ಮತಗಳ ಅಂತರದಿಂದ ಪರಾಭವಗೊಳಿಸಿ ಉಪರಾಷ್ಟ್ರಪತಿ ಯಾಗಿ ಆಯ್ಕೆಗೊಂಡಿದ್ದರು.