ಕಾರು-ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು

ಮಂಜೇಶ್ವರ: ಉಪ್ಪಳ ರೈಲ್ವೇ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯ ಅಬ್ದುಲ್ ಹಮೀದ್ (48) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಅಜಾಸ್ ಅಹಮ್ಮದ್ (41) ಎಂಬವರನ್ನು ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ೬.೩೦ರ ವೇಳೆ ಅಪಘಾತ ಸಂಭವಿಸಿದೆ. ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಬರುತ್ತಿದ್ದ ಸ್ಕೂಟರ್ ಹಾಗೂ ಹೊಸಂಗಡಿ ಭಾಗದಿಂದ ಉಪ್ಪಳಕ್ಕೆ ಬಂದ ಕಾರು ಪರಸ್ಪರ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅಬ್ದುಲ್ ಹಮೀದ್‌ರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತರು ಪತ್ನಿ ಸುಬೈದ, ಮಕ್ಕಳಾದ ಅಮಾನ್, ಅಸ್ಮಾನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page