17ರ ಹರೆಯದ ಹುಡುಗಿಯನ್ನು ತಡೆದು ನಿಲ್ಲಿಸಿ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ ಸಜೆ, ದಂಡ

ಕಾಸರಗೋಡು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 17ರ ಹರೆಯದ ಬಾಲಕಿಯನ್ನು ತಡೆದು ನಿಲ್ಲಿಸಿ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯ (ಪೋಕ್ಸೋ)ದ ನ್ಯಾಯಾಧೀಶ ಪಿ.ಎಂ. ಸುರೇಶ್ ಅವರು ಒಂದು ವರ್ಷ ಸಜೆ ಮತ್ತು 1೦,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಮುನ್ನಾಡು ಚೆಡಿಮೊಟ್ಟ ತಟ್ಟುಮ್ಮಲ್ ವೀಟಿಲ್‌ನ ಕಬೀರ್ (35) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾ ಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

2025 ಜನವರಿ 29ರಂದು ಬೆಳಿಗ್ಗೆ ಕಳನಾಡಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 17ರ ಹರೆಯದ ಹುಡುಗಿ ಯನ್ನು ದುರುದ್ದೇಶಪೂರ್ವಕವಾಗಿ ಸ್ಕೂಟರ್‌ನಲ್ಲಿ ಹಿಂಬಾಲಿಸಿಕೊಂಡು ಹೋಗಿ ತನ್ನ ಸ್ಕೂಟರ್‌ನಲ್ಲಿ ಏರುವಂತೆ ಆಕೆಯನ್ನು ಒತ್ತಾಯಿಸಿ  ಕಿರುಕುಳ ನೀಡಿದ ದೂರಿನಂತೆ ಆರೋಪಿ ಕಬೀರ್‌ನ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಪ್ರಸ್ತುತ ಠಾಣೆಯ ಎಸ್‌ಐ ಆಗಿದ್ದ ಕೆ. ವೇಲಾಯುಧನ್ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.

You cannot copy contents of this page