ಕೇರಳದಲ್ಲಿ ಆಡಳಿತ ಬದಲಾವಣೆ ಅನಿವಾರ್ಯ- ಎಂ.ಎಲ್. ಅಶ್ವಿನಿ

ಮಂಜೇಶ್ವರ: ಕೇರಳ ಇದೀಗ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಅಭಿವೃದ್ಧಿ ಕುಂಠಿತಕ್ಕೆ ಪರಿಹಾರ ಕಾಣಲು  ಆಡಳಿತ ಬದಲಾವಣೆ ಅನಿವಾರ್ಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದ್ದಾರೆ. ಬಿಜೆಪಿ ಮಂಜೇಶ್ವರ ಪಂಚಾಯತ್ ಚುನಾವಣಾ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ. ಅಧ್ಯಕ್ಷತೆ ವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ, ಕೆ. ಸತೀಶ್ಚಂದ್ರ ಭಂಡಾರಿ, ರಾಜ್ಯ ಕೌನ್ಸಿಲ್ ಸದಸ್ಯ ಹರಿಶ್ಚಂದ್ರ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಜಿಲ್ಲಾ ಸಮಿತಿ ಸದಸ್ಯ ಯಾದವ ಬಡಾಜೆ ಮೊದಲಾದವರು ಮಾತನಾಡಿದರು.

You cannot copy contents of this page