ಸ್ವಚ್ಛತೆಯ ಪ್ರಜ್ಞೆ: ನರೇಂದ್ರ ಮೋದಿಯವರ  ಜೀವನದ ಭಾಗ- ಎಂ.ಎಲ್. ಅಶ್ವಿನಿ

ಕಾಸರಗೋಡು: ಸ್ವಚ್ಛ ಭಾರತ ಎಂಬ ಪರಿಕಲ್ಪನೆಯನ್ನು ಮುಂಚೂಣಿಗೆ ತರುವ ಮೂಲಕ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಮಹತ್ವವನ್ನು ಜನರ ಮನಸ್ಸಿನಲ್ಲಿ ಬೇರೂರಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯ ವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಬಿಜೆಪಿ ಕಾಸರಗೋಡು ನಗರಸಭಾ ಟೌನ್ ಸಮಿತಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಕರಂದಕ್ಕಾಡಿನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ನಗರಸಭಾ ಟೌನ್ ಈಸ್ಟ್ ಏರಿಯಾ ಸಮಿತಿ ಅಧ್ಯಕ್ಷ ವರಪ್ರಸಾದ್ ಕೋಟೆಕಣಿ ಅಧ್ಯಕ್ಷತೆ ವಹಿಸಿದರು. ರಾಜ್ಯ ಸಮಿತಿ ಸದಸ್ಯೆ ಸವಿತ, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ರಾಜ್ಯ ಕೌನ್ಸಿಲ್ ಸದಸ್ಯ ಎನ್. ಸತೀಶ್, ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಪ್ರಧಾನ ಕಾರ್ಯದರ್ಶಿ ದಿವ್ಯಾ ಸಂದೀಪ್, ಜಿಲ್ಲಾ ಸಮಿತಿ ಸದಸ್ಯ ರವೀಂದ್ರ ಪೂಜಾರಿ, ಮಂಡಲ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮಂಡಲ ಕಾರ್ಯದರ್ಶಿ ರಾಜೇಶ್ ನಾಯ್ಕ್, ಮಂಡಲ ಕೋಶಾಧಿಕಾರಿ ಹರೀಶ್ ಕೆ.ಆರ್, ಏರಿಯಾ ಸಮಿತಿ ಪದಾಧಿಕಾರಿಗಳಾದ ಚೇತನ್, ಶರತ್ ಅಣಂಗೂರು, ನಗರಸಭಾ ಕೌನ್ಸಿಲರ್‌ಗಳಾದ ಶ್ರುತಿ, ಶಾರದಾ, ಸುಧಾರಾಣಿ ನೇತೃತ್ವ ನೀಡಿದರು. ಅಡ್ಕತ್ತಬೈಲ್‌ನಿಂದ ಹೊಸ ಬಸ್ ನಿಲ್ದಾಣವರೆಗಿನ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಯಿತು.

You cannot copy contents of this page