ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ತಿಂಬರ-ಕುಬಣೂರು ಒಳ ರಸ್ತೆ ಹದಗೆಟ್ಟು ಶೋಚನೀಯಾವಸ್ಥೆಗೆ ತಲುಪಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ದುರಸ್ತಿಗೆ ಊರವರು ಆಗ್ರಹಿಸಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿರುವುದೇ ರಸ್ತೆ ಶೋಚನೀಯಗೊಳ್ಳಲು ಕಾರಣವೆಂದು ಸ್ಥಳೀಯರು ತಿಳಿಸಿದ್ದಾರೆ. ಪ್ರತಾಪನಗರ, ಬೀಟಿಗದ್ದೆ ಸಹಿತ ಪರಿಸರ ಪ್ರದೇಶದ ನಾಗರಿಕರು, ಕುಬಣೂರು ಶಾಲಾ ಮಕ್ಕಳು, ಕ್ಷೇತ್ರ, ಮಸೀದಿ ಸಹಿತ ವಿವಿಧ ಕೆಲಸಗಳಿಗೆ ತೆರಳಲು ಹತ್ತಿರದ ರಸ್ತೆ ಇದಾಗಿದೆ. ಈಗ ರಸ್ತೆಯಲ್ಲಿ ಹೊಂಡ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಬೇಕೆಂದು ಊರವರು ಒತ್ತಾಯಿಸಿದ್ದಾರೆ.







