ಕಾಸರಗೋಡು: ಮೊಗ್ರಾಲ್ ಪುತ್ತೂರಿನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಪೋಸ್ಟರ್‌ಗಳನ್ನು ಹರಿದು ನಾಶಗೊಳಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಅಬ್ದುಲ್ ಖಾದರ್ ಕಡವತ್ ಎಂಬವರು ನೀಡಿದ ದೂರಿನಂತೆ ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಗಲಭೆ ಸೃಷ್ಟಿಸಲು ಯತ್ನಿಸಲಾಯಿತೆಂಬ ಆರೋಪದಂತೆ ಕೇಸು ದಾಖಲಿಸಲಾಗಿದೆ. ಮೊಗ್ರಾಲ್ ಪುತ್ತೂರು ಪಂಚಾಯತ್ ೧ನೇ ವಾರ್ಡ್‌ನ ಮುಸ್ಲಿಂ ಲೀಗ್ ಅಭ್ಯರ್ಥಿ ಧರ್ಮಪಾಲನ್ ದಾರಿಲ್ಲತ್ ಎಂಬವರ ಚುನಾವಣಾ ಪ್ರಚಾರಾರ್ಥ ಮೊಗರಿನಲ್ಲಿರುವ ಮನೆ ಹಿತ್ತಿಲುಗಳಲ್ಲಿ ಸ್ಥಾಪಿಸಿದ್ದ ಪೋಸ್ಟರ್‌ಗಳನ್ನು ನಾಶಗೊಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.







