ಮ೦ಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ (೬೫) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರರ‍್ತಿ’ ಎಂಬ ಬಿರುದು ಹೊ೦ದಿದ್ದರು. ದಾಮೋದರ ಮಂಡೆಚ್ಚರ ಗರಡಿಯಲ್ಲಿ ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚ೦ಡೆ ಮತ್ತು ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು.
ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು, ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿದ್ದು ವಿಶೇಷ. ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ ಅವರು, ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರಮಾನ್ಯ ಸ್ಥಾನಕ್ಕೇರಿದ್ದರು.
ಅವರ ಅನುಪಮ ಕಲಾ ಸೇವೆಗೆ ಉಡುಪಿ ತುಳುಕೂಟವು ಪ್ರತಿಷ್ಠಿತ ‘ಸಾಮಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಮಲ್ಪೆ ರಾಮದಾಸ ಸಾಮಗ, ಅಳಿಕೆ ರಾಮಯ್ಯ ರೈ, ಕೋಳೂರು ರಾಮಚಂದ್ರ ರಾವ್ ಅವರಂತಹ ಮೇರು ಕಲಾವಿದರ ಒಡನಾಟದಲ್ಲಿ ತಮ್ಮ ಕಲಾ ಅನುಭವವನ್ನು ಶ್ರೀಮಂತಗೊಳಿಸಿಕೊಂಡ ಅಮ್ಮಣ್ಣಾಯರು, ಇತ್ತೀಚೆಗೆ ಎಡನೀರು ಮೇಳದಲ್ಲಿ ತಿರುಗಾಟ ಪರ‍್ಣಗೊ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಜನಪ್ರಿಯಗೊಳಿಸಿದ ಪ್ರಸಂಗಗಳು: ಅಮ್ಮಣ್ಣಾಯರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಅಲ್ಲದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿ ಅಪಾರ ಜನಮನ್ನಣೆ ಗಳಿಸಿದವರು. ಅದರಲ್ಲೂ ‘ಕಾಡಮಲ್ಲಿಗೆ’, ‘ಕಚೂರ ಮಾಲ್ಲಿ’, ‘ಪಟ್ಟದ ಪದ್ಮಲೆ’ ಹಾಗೂ ‘ಮಾನಿಷಾದ’ ದಂತಹ ಪ್ರಸಂಗಗಳನ್ನು ತಮ್ಮ ಗಾಯನದಿಂದ ಜನಪ್ರಿಯಗೊಳಿಸಿದ ಕರ‍್ತಿ ಪ್ರಸಂಗದ ಹಾಡುಗಳಿಗೆ ಅಭಿಮಾನಿಗಳು ಸಹಸ್ರಾರು.







