ಕಾಸರಗೋಡು: ಆಟೋದಲ್ಲಿ 34.2 ಲೀಟರ್ ಗೋವಾ ನಿರ್ಮಿತ ವಿದೇಶ ಮದ್ಯವನ್ನು ಸಾಗಿಸುತ್ತಿದ್ದ ವೇಳೆ ವಶಪಡಿಸಲಾಗಿದೆ. ಆಟೋಚಾಲಕ ವಾಹನವನ್ನು ಉಪೇಕ್ಷಿಸಿ ಪರಾರಿಯಾಗಿದ್ದಾನೆ. ಶನಿವಾರ ರಾತ್ರಿ 8 ಗಂಟೆ ವೇಳೆ ಕೂಡ್ಲು ಪಾಯಿಚ್ಚಾ ಲ್‌ನಲ್ಲಿ ಘಟನೆ ನಡೆದಿದೆ. ಕಾಸರಗೋಡು ಅಬಕಾರಿ ಸ್ಪೆಷಲ್ ಸ್ಕ್ವಾಡ್ ಪ್ರಿವೆಂಟಿವ್ ಆಫೀಸರ್ ಕೆ.ವಿ. ರಂಜಿತ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ. ಆಟೋವನ್ನು ತಡೆದು ನಿಲ್ಲಿಸಿದಾಗ ಚಾಲಕ ಪರಾರಿ ಯಾಗಿದ್ದಾನೆ. ಮಾಲನ್ನು ಕಾಸರಗೋಡು ಅಬಕಾರಿ ರೇಂಜ್ ಕಚೇರಿಗೆ ಹಾಜರುಪಡಿಸಲಾಗಿದೆ.







