ವೃದ್ಧ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು:?ಮುಳಿಯಾರು ಪಂಚಾಯತ್‌ನ ಕಾನತ್ತೂರಿನಲ್ಲಿ ವೃದ್ಧ  ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್  (ತರಯಿಲಚ್ಚನ್-84) ಎಂಬವರು  ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು ಕಾಣದ ಹಿನ್ನೆಲೆಯಲ್ಲಿ ಹುಡುಕಿದಾಗ ಮನೆಯ ಹಿಂಭಾಗದಲ್ಲಿ  ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆದೂರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಕಮಲಾಕ್ಷಿ, ಮಕ್ಕಳಾದ ರಾಧ, ಗೀತ, ಸುನಿತ, ಅಳಿಯಂದಿರಾದ ಮುರಳಿ, ಚಂದ್ರನ್, ಸಹೋದರಿಯರಾದ ಜಾನಕಿ, ಕೊರಪ್ಪಾಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವ ಅಳಿಯ ಕುಮಾರನ್, ಸಹೋದರ ಸುಕುಮಾರನ್ ಎಂಬಿವರು ಈ ಹಿಂದೆ ನಿಧನರಾಗಿದ್ದಾರೆ.

RELATED NEWS

You cannot copy contents of this page