ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಳಿಕ ಬಿಸಿ ರೋಡ್, ಅಣಂಗೂರು, ರೈಲ್ವೇ ನಿಲ್ದಾಣ, ಚೇನೆಕ್ಕೋಡ್, ಮಧೂರು, ಚೌಕಿ, ಪೆರಿಯಡ್ಕ, ಪೆರ್ನಡ್ಕ, ಉಳಿಯತ್ತಡ್ಕ ಎಂಬೆಡೆಗಳಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.






