ನಿಲ್ಲಿಸಿದ್ದ ಕಾರಿನೊಳಗೆ ವಿದ್ಯಾರ್ಥಿನಿಗೆ ಕಿರುಕುಳ: ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಯುವಕನ ವಿರುದ್ಧ ಪೋಕ್ಸೋ ಕೇಸು

ಕುಂಬಳೆ: ಕುಂಬಳೆ ರೈಲು ನಿಲ್ದಾಣ ಸಮೀಪದ  ನಿರ್ಜನ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ 16ರ ಹರೆಯದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ  ಕಾಸರಗೋಡು ನಗರ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಹಮ್ಮದ್ ಅಪ್ಸಲ್ ಎಂಬಾತನ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ.  ಕಾಸರಗೋಡು ಪೊಲೀಸ್  ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ  ಪ್ಲಸ್‌ವನ್ ವಿದ್ಯಾರ್ಥಿನಿ ಯಾಗಿದ್ದಾಳೆ. ಅಸಹನೀಯ ಹೊಟ್ಟೆ ನೋವು ಅನುಭವಗೊಂಡ ಹಿನ್ನೆಲೆಯಲ್ಲಿ ಬಾಲಕಿ   ವೈದ್ಯರಲ್ಲಿ ತಪಾಸಣೆ ನಡೆಸಿದಾಗ  ಆಕೆ ಕಿರುಕುಳಕ್ಕೊಳಗಾದ ವಿಷಯ ತಿಳಿದುಬಂದಿದೆ. ಈ ಬಗ್ಗೆ ವೈದ್ಯರು ಕುಂಬಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಂತೆ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ.

RELATED NEWS

You cannot copy contents of this page