ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣಾ ಪ್ರಚಾರ

ಉಪ್ಪಳ: ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್, ಯು.ಡಿ.ಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್, ಎಡರಂಗ ಅಭ್ಯರ್ಥಿ ಕೆ.ಆರ್.ಜಯಾನಂದ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿ ಕೆ.ಎಂ ಅಶ್ರಫ್‌ರ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಸೋಂಕಾಲಿನಲ್ಲಿ ಗೋಡೆ ಬರಹದ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದರು. ಬಳಿಕ ವಿವಿಧ ಆರಾಧನಾಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಗೂ ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದ್ದಾರೆ. ಮಂಗಲ್ಪಾಡಿ ಪಂಚಾಯತ್ ಸಹಿತ ವಿವಿಧ ಪಂಚಾಯತ್ ಮಟ್ಟದಲ್ಲಿ ಮೊದಲ ಹಂತದ ಮಹಾ ಗೃಹ ಸಂಪರ್ಕ, ಕುಟುಂಬ ಸಭೆಗಳು ನಡೆದಿದೆ. ಪಂ ಚಾಯತ್ ಮಟ್ಟದ ಕಾರ್ಯಕರ್ತರ ಸಮಾವೇಶ ಆರಂಭಗೊಳ್ಳಲಿದೆ.
ಬಿಜೆಪಿ ಮಂಗಲ್ಪಾಡಿ ಪಂಚಾಯತ್ ಕಾರ್ಯಕರ್ತರ ಸಮಾವೇಶ ಇಂದು
ಉಪ್ಪಳ: ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಗೊಳಪಟ್ಟ ಕಾರ್ಯಕರ್ತರ ಸಮಾವೇಶ ಇಂದು ಸಂಜೆ 6ಕ್ಕೆ ಸೋಕಾಲಿನಲ್ಲಿರುವ ಮಂಜೇಶ್ವರ ವಿಧಾನ ಸಭಾ ಚುನಾವಣಾ ಕಚೇರಿಯಲ್ಲಿ ನಡೆಯಲಿದೆ.

RELATED NEWS

You cannot copy contents of this page