ಜಾಂಬ್ರಿ ಗುಹಾ ಪರಿಸರದಲ್ಲಿ ಬೆಂಕಿ ಆಕಸ್ಮಿಕ

ಬೆಳ್ಳೂರು: ಗಡಿ ಪ್ರದೇಶವಾದ ಬಂಟಾಜೆ ಚೆಂಡೆತ್ತಡ್ಕ ಬಯಲಿನಲ್ಲಿ ನಿನ್ನೆ ಸಂಜೆ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಒಣಹುಲ್ಲು ಉರಿದು ನಾಶಗೊಂಡಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಪುತ್ತೂರಿನಿಂದ ಅಗ್ನಿಶಾಮಕದಳ ತಲುಪಿ ಬೆಂಕಿ ನಂದಿಸಿದ್ದು, ಸ್ಥಳೀಯರು ಸಹಕಾರ ನೀಡಿದರು.

ಪ್ರಸಿದ್ಧ ಜಾಂಬ್ರಿ ಗುಹಾ ಪ್ರದೇಶವಿದಾಗಿದ್ದು, ಕರ್ನಾಟಕದ ಬಂಟಾಜೆ ಹಾಗೂ ಕೇರಳದ ಪರಪ್ಪ ರೇಂಜ್‌ಗೆ ಒಳಗೊಂಡ ರಕ್ಷಿ ತಾರಣ್ಯವಾಗಿದೆ. ಮರಗಿಡಗಳಿಗೆ ಬೆಂಕಿ ವ್ಯಾಪಿಸುವ ಮುನ್ನ ನಂದಿಸಿದ ಕಾರಣ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

You cannot copy contents of this page