ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ 16ರ ಹರೆಯದ ಬಾಲಕಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈ ತಿಂಗಳ 18ರಂದು ರಾತ್ರಿಯಿಂದ ಬಾಲಕಿ ನಾಪತ್ತೆಯಾಗಿದ್ದಾಳೆನ್ನಲಾಗಿದೆ. ಇದೇ ವೇಳೆ ಬಾಲಕಿ ಸಂಬಂಧಿಕನಾದ ಯುವಕನೊಂದಿಗೆ ತೆರಳಿರುವುದಾಗಿ ಸಂಶಯಿಸಲಾಗುತ್ತಿದೆಯೆಂದು ಹೇಳಲಾಗಿದೆ.
