ಬದಿಯಡ್ಕ: 45ರ ಹರೆಯದ ವ್ಯಕ್ತಿಯಿಂದ ಲೈಂಗಿಕ ಕಿರುಕುಳಕ್ಕೊಳಗಾದ 17ರ ಹರೆಯದ ಬಾಲಕಿ ಗರ್ಭಿಣಿಯಾಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬದಿಯಡ್ಕ ಪೊಲೀಸರು ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಸಹನೀಯ ಹೊಟ್ಟೆ ನೋವು ಅನುಭವಗೊಂಡ ಬಾಲಕಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದಾಗಲೇ ಆಕೆ ಗರ್ಭಿಣಿಯಾಗಿದ್ದಾಳೆಂಬ ವಿಷಯ ತಿಳಿದುಬಂದಿದೆ. ಈ ಬಗ್ಗೆ ವೈದ್ಯರು ಬದಿಯಡ್ಕ ಪೊಲೀಸರಿಗೆ ತಿಳಿಸಿದ್ದಾರೆ. ಇದರಂತೆ ಪೊಲೀಸರು ಬಾಲಕಿಯಿಂದ ಮಾಹಿತಿ ಸಂಗ್ರಹಿಸಿಕೊಂಡ ಬಳಿಕ ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.






