ಕಾಸರಗೋಡು: ವಿಷ ಸೇವಿಸಿ ಗಂಭೀರ ಅಸ್ವಸ್ಥಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ತಲೆಹೊರೆ ಕಾರ್ಮಿಕ ಮೃತಪಟ್ಟನು. ಕೇಳುಗುಡ್ಡೆ ನಿವಾಸಿ ಉಮೇಶ್ ಎಂಬವರ ಪುತ್ರ ಯೋಗೀಶ್ (32) ಮೃತಪಟ್ಟ ಯುವಕ. ಬಟ್ಟಂಪಾರೆಯಲ್ಲಿ ತಲೆಹೊರೆ ಕಾರ್ಮಿಕನಾಗಿದ್ದ ಇವರು ಬಿಎಂಎಸ್ ಕಾರ್ಯಕರ್ತ ನಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ ಸ್ಥಿತಿಯಲ್ಲಿ ಯೋಗೀಶ್ ಪತ್ತೆಯಾಗಿದ್ದರು. ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೂ ಬಳಿಕ ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಮೃತರು ತಂದೆ, ತಾಯಿ ಚಂಚಲ, ಸಹೋದರ ಅನಿಲ್, ಸಹೋದರಿ ಅನಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
