ಮಂಜೇಶ್ವರ : ಮಜಿಬೈಲ್ ಕೊಡ್ದೆ ನಿವಾಸಿ ದಿ| ರವಿ ಎಂಬವರ ಪತ್ನಿ ಕಮಲ (56) ನಿಧನ ಹೊಂದಿದರು. ಹಲವು ತಿಂಗಳಿAದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಬುಧವಾರ ರಾತ್ರಿ ಉಸಿರಾಟದ ತೊಂದರೆ ಜೋರಾದ ಹಿನ್ನೆಲೆಯಲ್ಲಿ ಅವರನ್ನು ಕಾಸರ ಗೋಡು ಜನರಲ್ ಆಸ್ಪತ್ರೆಗೆ ಕೊಂ ಡೊಯ್ದಿದ್ದಾರೆ. ಅಲ್ಲಿ ತಪಾಸಣೆ ನಡೆಸುತ್ತಿರುವ ವೇಳೆ ಮೃತಪಟ್ಟಿದ್ದರು. ಪುತ್ರ ಸುಭಾಷ್, ಸಹೋದರಿ ಶಾರದಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಜೇಶ್ವರ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜನರಲ್ ಆಸ್ಪತ್ರೆಯಲ್ಲಿ ಮರಣೋ ತ್ತರ ಪರೀಕ್ಷೆ ನಡೆಸಿದ ಬಳಿಕ ನಿನ್ನೆ ಸಂಜೆ ಅಂತ್ಯ ಸಂಸ್ಕಾರ ನಡೆಸಲಾಯಿತು.





