ಬದಿಯಡ್ಕ: ನಾಡೋಜ ಕವಿ ಡಾ. ಕಯ್ಯಾರ ಕಿಞ್ಞಣ್ಣ ರೈಯವರ ಸ್ಮರಣಾರ್ಥ ಬದಿಯಡ್ಕದಲ್ಲಿ ಕರ್ನಾಟಕ ಸರಕಾರದ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನಿರ್ಮಿಸಲಾದ ಕನ್ನಡ ಭವನದ ಉದ್ಘಾಟನೆ ಈ ತಿಂಗಳ 3೦ರಂದು ನಡೆಯಲಿದೆ.
ಈ ಕಾರ್ಯಕ್ರಮದ ಯಶಸ್ವಿಗೆ, ಪೂರ್ವಸಿದ್ಧತೆಗಾಗಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಇಂದು ಅಪರಾಹ್ನ 2 ಗಂಟೆಗೆ ಬದಿಯಡ್ಕ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕೆಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




