ಕಡಂಬಾರು ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಉದ್ಘಾಟನೆ

ಕಡಂಬಾರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ಲಾನ್‌ಫಂಡ್ ಉಪಯೋಗಿಸಿ ಕಡಂಬಾರು ಸರಕಾರಿ ಹೈಸ್ಕೂಲ್‌ಗೆ 1.09 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಆರು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಎಕೆಎಂ ಅಶ್ರಫ್ ನಿರ್ವಹಿಸಿದರು. ಮೀಂಜ ಪಂಚಾಯತ್ ಅಧ್ಯಕ್ಷ ಸಿ.ಎ. ತಾಜುದ್ದೀನ್ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನಾ ಇಕ್ಬಾಲ್, ಪಿಟಿಎ ಅಧ್ಯಕ್ಷ ಮೊಯ್ದೀನ್ ಕುಂಞಿ, ಮುಖ್ಯೋಪಾಧ್ಯಾಯ ಎಂ. ಅಶೋಕ, ಅಧ್ಯಾಪಕ ಅಬೂಬಕ್ಕರ್ ಮಾತನಾಡಿದರು.

You cannot copy contents of this page