ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರಾಜಿಲ್ಲೆಯಲ್ಲಿ ಇಂದು ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆ ವೇಳೆ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಆ ಮೂಲಕ ಮಚ್ಚಿಲ್ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಪಾಕಿಸ್ತಾನ ಭಯೋತ್ಪಾದಕರು ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದರು. ಅದನ್ನು ಗಮನಿಸಿದ ಭಾರತೀಯ ಸೇನೆ ತಕ್ಷಣ ಪ್ರತಿದಾಳಿ ನಡೆಸಿ ಉಗ್ರರು ನುಸುಳುವ ಯತ್ನವನ್ನು ತಡೆದಿದೆ ಮಾತ್ರವಲ್ಲ ಇಬ್ಬರು ಉಗ್ರರನ್ನು ಅಲ್ಲೇ ಮುಗಿಸಿದೆ. ಇತರ ಯಾವುದೇ ಭಯೋತ್ಪಾದಕರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸೇನಾ ಸಿಬ್ಬಂದಿಗಳು ಈ ಪ್ರದೇಶದಲ್ಲಿ  ಇನ್ನೂ ಕೊಂಬಿಂಗ್ ಕಾರ್ಯಾ ಚರಣೆಯನ್ನು ಮುಂದುವರಿಸಿದ್ದಾರೆ.

ಈ ಒಳ ನುಸುಳುವಿಕೆ ಪ್ರಯತ್ನವು ಪಾಕಿಸ್ತಾನದ ನಿರಂತರ ಕದನವಿರಾಮ ಉಲ್ಲಂಘನೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಪ್ರಚೋದಿಸುವ ಭಾಗವಾಗಿದೆ. ಅಂತಹ ಎಲ್ಲಾ ಯತ್ನಗಳನ್ನು ವಿಫಲ ಗೊಳಿಸಲಾಗುವುದೆಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಮಾತ್ರವಲ್ಲ ಗಡಿಯುದ್ದಕ್ಕೂ ತೀವ್ರ ಕಟ್ಟೆಚ್ಚರ ಪಾಲಿಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

You cannot copy contents of this page