ಉಪ್ಪಳ: ಶ್ರೀ ಕ್ಷೇತ್ರ ಸಂತಡ್ಕ ಮಾಡದ ವಾರ್ಷಿಕ ಜಾತ್ರಾ ಮಹೋತ್ಸವ ಜನವರಿ 20ರಿಂದ 23ರವರೆಗೆ ಜರಗಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರಾಡಳಿತ ಟ್ರಸ್ಟ್ನ ಅಧ್ಯಕ್ಷ ಡಾ. ಶ್ರೀಧರ ಭಟ್ ಉಪ್ಪಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿ ಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಶ್ವರ ವಸಂತ ಭಟ್ ತೊಟ್ಟೆತ್ತೋಡಿ, ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.







