ಉಪ್ಪಳ: ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕೆ.ಪಿ. ವಲ್ಸರಾಜ್ ಆಯ್ಕೆಯಾಗಿದ್ದಾರೆ. ಯುವಮೋರ್ಚ ಮಂಗಲ್ಪಾಡಿ ಪಂಚಾಯತ್ ಪ್ರಧಾನ ಕಾರ್ಯದರ್ಶಿಯಾಗಿ 1992 ರಲ್ಲಿ ಅಧಿಕಾರ ವಹಿಸಿದ್ದರು. ಬಳಿಕ ಯುವಮೋರ್ಚ ಮಂಗಲ್ಪಾಡಿ ಪಂಚಾಯತ್ ಪ್ರಧಾನ ಕಾರ್ಯದರ್ಶಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ, ಮಂಜೇಶ್ವರ ಮಂಡಲ ಅಧ್ಯಕ್ಷ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಮಂಡಲ ಅಧ್ಯಕ್ಷ, ಜಿಲ್ಲಾ ಕಾರ್ಯದರ್ಶಿ ಎಂಬೀ ಪದವಿಗಳನ್ನು ವಹಿಸಿದ್ದರು. ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.
