ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಾಪ್ತಿ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಭಗವತಿ ಮಾತೆಯರ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿ ಪೌರೋಹಿತ್ಯ ವಹಿಸಿದರು. ಇದೇ ವೇಳೆ ನಡೆದ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾ ನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ವಿವಿಧ ವಿಭಾಗಗಳ ಗಣ್ಯರು ಉಪಸ್ಥಿತರಿ ದ್ದರು. ಈ ತಿಂಗಳ 26ರಿಂದ ಮೇ 3ರ ತನಕ ಕ್ಷೇತ್ರದಲ್ಲಿ ಭರಣಿ ಮಹೋತ್ಸವ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.

You cannot copy contents of this page