ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕಿ ನಿರ್ಮಲ ಮಠಪತಿ ಭೇಟಿ

ಮಂಜೇಶ್ವರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ ಮಂಜೇಶ್ವರ ಗಿಳಿವಿಂಡುಗೆ ಭೇಟಿ ನೀಡಿ ಮಾಹಿತಿ ಪಡೆದರು. ರಾಷ್ಟ್ರಕವಿ ಗೋವಿಂದ ಪೈಗಳನ್ನು ಹಾಗೂ ಅವರ ಸಾಹಿತ್ಯದ ಮೌಲ್ಯವನ್ನು ಮುಂದಿನ ತಲೆಮಾರಿಗೆ ತಿಳಿಸುವ ಕೆಲಸವಾಗಬೇಕು, ಅವರ ಸಾಹಿತ್ಯ ಇತರ ಭಾಷೆಗಳಿಗೆ ಅನುವಾದವಾಗುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರಮಿಸುವಂತೆ ಸೂಚಿಸಿ, ಸರಕಾರದ ಕಡೆಯಿಂದ ಇಲಾಖೆಯ ಮೂಲಕ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜೊತೆಗಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ಗೆ ಆಗಮಿಸಿದಾಗ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಙಳ್, ಟ್ರಸ್ಟಿಗಳಾದ ಡಾ. ಉದಯ ಕುಮಾರ ಇರ್ವತ್ತೂರು, ಸುಭಾಶ್‌ಚಂದ್ರ ಕಣ್ವತೀರ್ಥ, ಗಮಕ ಪರಿಷತ್ ಅಧ್ಯಕ್ಷ ಶಂಕರ ನಾರಾಯಣ ಭಟ್ ಉಪಸ್ಥಿತಿರಿದ್ದರು.

You cannot copy contents of this page