ಧಾರ್ಮಿಕ ಮುಂದಾಳು ಗೋಪಾಲಕೃಷ್ಣ ಕುಲಾಲ್‌ರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು :ಕನ್ನಡ ರಾಜ್ಯೋ ತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋ ತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮುಂದಾಳು, ವಾಗ್ಮಿ, ಬದಿಯಡ್ಕ ತುಳುವೆರೆ ಆಯನೊ ಕೂಟದ ಅಧ್ಯಕ್ಷ, ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲು ಅವರಿಗೆ ಕಲ್ಕೂರ ರಾಜ್ಯೋತ್ಸವ ಪುರಸ್ಕಾರ ಪ್ರದಾನ ಮಾಡಲಾಯಿತು.
ಮಂಗಳೂರು ಡಾನ್‌ಬಾಸ್ಕೋ ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಶಾರದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸುರೇಶ್ ಶೆಟ್ಟಿ ಯೆಯ್ಯಾಡಿ, ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಹಲವರು ಉಪಸ್ಥಿತರಿದ್ದರು.

You cannot copy contents of this page