ಮಂಜೇಶ್ವರ: ಮಂಜೇಶ್ವರ ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಧಿಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಆಲ್ಟೋ ಕಾರಿನಲ್ಲಿ ಸಾಗಿಸುತ್ತಿದ್ದ 480 ಪ್ಯಾಕೆಟ್ (86.4 ಲೀಟರ್) ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕಾಸರಗೋಡು ಬೆದ್ರಡ್ಕ ನಿವಾಸಿ ಸುರೇಶ್ ಕುಮಾರ್ ಬಿ.ಪಿ. ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಮಾಲು ಸಾಗಿಸಲು ಬಳಸಲಾಗಿದ್ದ ವಾಹನವನ್ನೂ ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ.
ಸರ್ಕಲ್ ಎಕ್ಸೈಸ್ ಇನ್ಸ್‌ಪೆಕ್ಟರ್ ಶಿಜಿಲ್ ಕುಮಾರ್‌ರ ನೇತೃತ್ವದಲ್ಲಿ ಎಕ್ಸೈಸ್ ಇನ್ಸ್‌ಪೆಕ್ಟರ್ ಜಿನು ಜೇಮ್ಸ್, ಪ್ರಿವೆಂಟೀವ್ ಆಫೀಸರ್‌ಗಳಾದ ಜಿಜಿನ್ ಎಂ.ವಿ, ಬಾಬುರಾಜನ್ ಪಿ.ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಸಜಿತ್ ಸುನಿಲ್ ಕುಮಾರ್, ಕೆಮು ಘಟಕದ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ ಸುರೇಶ್ ಬಾಬು, ಪ್ರಿವೆಂಟೀವ್ ಆಫೀಸರ್ ದಿನೇಶ್ ಕುಂಡತ್ತಿಲ್, ಸಿಇಒ ವಿಷ್ಣು ಮತ್ತು ಚಾಲಕ ಸುಮೇದ್ ಎಂ.ವಿ. ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.