ಕಾಸರಗೋಡು: ಹೊಸದುರ್ಗ ಬಲ್ಲಾ ಬಾರಾ ಗ್ರಾಮದ ಎರೋಲ್ ನಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಆಫೀಸರ್ (ಗ್ರೇಡ್) ಶ್ರೀನಿವಾಸನ್ ಪತ್ತಿಲ್‌ರ ನೇತೃತ್ವದ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಚರಣೆಯಲ್ಲಿ 7.56 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಪನಯಾಲ್ ನೆಲ್ಲಿಯಡ್ಕದ ಜಗದೀಶ್ ಜೆ (39) ಎಂಬಾತನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಪ್ರಮೋದ್ ಕುಮಾರ್, ಸಿಕೆವಿ ಸುರೇಶ್, ಇತರ ಸಿಬ್ಬಂದಿಗಳಾದ ಅಜೀಶ್, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮಂಜುನಾಥನ್ ಮತ್ತು ರಾಜೇಶ್ ಎಂಬವರು ಒಳಗೊಂಡಿದ್ದರು.