25 ಲೀಟರ್ ಕರ್ನಾಟಕ ಮದ್ಯ ಸಹಿತ ಸ್ಕೂಟರ್ ವಶ

ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು, ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.

ಸ್ಪೆಷಲ್ ಸ್ಕ್ವಾಡ್‌ನ ಎಕ್ಸೈಸ್ ಇನ್ಸ್‌ಪೆಕ್ಟರ್ ವಿಷ್ಣು ಪ್ರಕಾಶ್‌ರ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮಂಜುನಾಥನ್ ವಿ., ಶಿಜಿತ್ ಪಿ.ವಿ, ಚಾಲಕ ಕ್ರಿಸ್ಟಿನ್ ಪಿ.ಎ. ಎಂಬವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

RELATED NEWS

You cannot copy contents of this page