ಪೊಸೋಟು ಹೆದ್ದಾರಿಯಲ್ಲಿ ಕರ್ನಾಟಕ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ: ಹಲವರಿಗೆ ಗಾಯ

ಪೊಸೋಟ್ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಹಲವು ಮಂದಿಗೆ ಗಾಯ
ಮಂಜೇಶ್ವರ: ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಸಹಿತ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡಿನಿಂದ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ಬಸ್ ರಾಷ್ಟಿçÃಯ ಹೆದ್ದಾರಿ ಪೊಸೋಟು ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಲ್ಲಿಂದ ಇನ್ನೊಂದು ಭಾಗದ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಈ ಅಪಘಾತದಲ್ಲಿ ಚಾಲಕ ಹಾಗೂ ಮಹಿಳೆಯರು ಸೇರಿದಂತೆ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂ ಡಿದ್ದು, ಬಸ್‌ನ ಮುಂಭಾಗ ಹಾನಿಗೊಂಡಿದೆ. ಅಪಘಾತ ನಡೆದ ಬಗ್ಗೆ ತಿಳಿದು ಸ್ಥಳೀಯರು ಹಾಗೂ ಪೊಲೀಸರು ತಲುಪಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ಬಸ್‌ಗಳು ಹೆದ್ದಾರಿಯಲ್ಲಿ ಸಂಚರಿಸುವುದರಿAದ ಪ್ರಯಾಣಿಕರು ಸಮಸ್ಯೆಗೀಡಾಗುತ್ತಿದ್ದು, ಬಸ್ ಸರ್ವೀಸ್ ರಸ್ತೆಯಲ್ಲೇ ಸಂಚರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

You cannot copy contents of this page