ಕೇರಳ ಕರ್ನಾಟಕ ಜಾನಪದ ಉತ್ಸವ ಕೊಚ್ಚಿಯಲ್ಲಿ 27ರಂದು ಪದಗ್ರಹಣ, ಪ್ರಶಸ್ತಿ ಪ್ರದಾನ ಸಮಾರಂಭ, ಕೃತಿ ಬಿಡುಗಡೆ

ಕಾಸರಗೋಡು:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಜಾನಪದ ಪರಿಷತ್ತು (ಕಜಾಪ) ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಕೇರಳ ಕರ್ನಾಟಕ ಜಾನಪದ ಉತ್ಸವ’, ಕಜಾಪ ಪದಾಧಿಕಾರಿಗಳ ಪದಗ್ರಹಣ, ಕೃತಿ ಬಿಡುಗಡೆ, ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಉದ್ಘಾಟಿಸಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಲಿದ್ದು, ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕ ಭಾಷಣ ಮಾಡುವರು.
ರಾಜ್ಯದ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ವಿ.ಇ. ಅಬ್ದುಲ್ ಗಫೂರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಶಿವರಾಮ ಕೆ. ಭಂಡಾರಿ, ಪ್ರಸನ್ನ ಕುಮಾರ್, ಡಾ.ಸಂದೀಪ್ ಪುರಂದರ ಶೆಟ್ಟಿ, ಎಸ್. ಜಗದೀಶ್ ಚಂದ್ರ ಅಂಚನ್, ಶಾಫಿ ಎಂ.ಬAಡಸಾಲೆ ಮತ್ತು ರಾಘವ ಚೇರಾಲ್ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡುವರು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಅಧ್ಯಕ್ಷ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಕೇರಳ ಘಟಕದ ನೂತನ ಸಾರಥಿಗಳ ಪದಗ್ರಹಣ ಘೋಷಿಸುವರು. ಇದೇ ವೇಳೆ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಲಕ್ಷ್ಮೀ ಮಹೇಶ್ ರಾಜು ಅವರ ‘ಇಲ್ಲಿ-ಇಂತು-ಹೀಗೆ’ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ಕವಯಿತ್ರಿ ಲಕ್ಷ್ಮಿ ಕೆ. ಅಧ್ಯಕ್ಷತೆಯಲ್ಲಿ ಬಹುಭಾಷಾ ‘ಕವಿಗೋಷ್ಠಿ’ ನಡೆಯಲಿದೆ.
ಶಾಸಕ ಟಿ.ಜೆ. ವಿನೋದ್, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯ ಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಗಡಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಶಿವರೆಡ್ಡಿ ಖ್ಯಾಡೇದ್, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಕೊಚ್ಚಿ ಚಂಗAಪುಝ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಟಿ.ಜಿ.ರವಿ ಕುಮಾರ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ.ಶಂಕರನಾರಾಯಣ ಭಟ್ ಸಾಮಾಜಿಕ ಕಾರ್ಯಕರ್ತರಾದ ಸರಿನ್ ಮೊಹಮ್ಮದ್, ಸಿದ್ದಿಕ್ ಪಚ್ಚಂಬಳ, ಕ.ಜಾ.ಪ. ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್. ನಾಸಿ, ಪ್ರಧಾನ ಕಾರ್ಯದರ್ಶಿ ರವಿ ನಾಯ್ಕಾಪು, ಖಜಾಂಚಿ ಪೃಥ್ವಿರಾಜ್ ಶೆಟ್ಟಿ ಕುಂಬಳೆ, ಕಾರ್ಯಕಾರಿ ಸಮಿತಿ ಸದಸ್ಯ, ವಕೀಲ ಎಂ.ಎಸ್. ಥೋಮಸ್ ಡಿಸೋಜ, ಪತ್ರಕರ್ತ ಪುರುಷೋತ್ತಮ ಪೆರ್ಲ ಸಹಿತ ಸಾಂಸ್ಕೃತಿಕ, ಸಾಮಾಜಿಕ ವಲಯದ ಗಣ್ಯರು ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮ ದಂಗವಾಗಿ ಪೋತ್ತನಿಕ್ಕಾಡ್ ಪೆರುನೀರ್ ಶಿವಶೈಲಂ ತಂಡದವರಿAದ ಕೇರಳದ ಸಾಂಪ್ರದಾಯಿಕ ನೃತ್ಯ ‘ತಿರುವಾದಿರಕ್ಕಳಿ’ ಪ್ರದರ್ಶನಗೊಳ್ಳಲಿದೆ. ಅಲ್ಲದೆ ಬೆಂಗಳೂರಿನ ಡಾ. ಕೆ.ಎನ್. ನಾಗೇಶ್ ಮತ್ತು ತಂಡದವರಿAದ ‘ಜಾನಪದ ಗಾಯನ’ ಹಾಗೂ ಗಡಿನಾಡಿನ ವಿವಿಧ ಸಾಂಸ್ಕೃತಿಕ ತಂಡಗಳಿAದ ವೈವಿಧ್ಯಮಯ ಕಲಾ ಪ್ರದರ್ಶನಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

RELATED NEWS

You cannot copy contents of this page