ಕೊಂಡೆವೂರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ಕೃಷ್ಣ ವೇಷ ಸ್ಪರ್ಧೆ

ಉಪ್ಪಳ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ಮಕ್ಕಳು ಕೃಷ್ಣನ ವಿವಿಧ ವೇಷ ದsರಿಸಿ ಗಮನ ಸೆಳೆದರು. ಶಾಲೆಯ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ, ಬಾಲ ಕೃಷ್ಣ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

You cannot copy contents of this page