ಕುಂಬಳೆ: ಸ್ಥಳೀಯ ಮಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸಿದ ತನಗೆ ಕೊಲೆ ಬೆದರಿಕೆ ಇದೆ ಎಂದು ಆರ್.ಟಿ.ಐ. ಕಾರ್ಯಕರ್ತ ಎನ್. ಕೇಶವ ನಾಯಕ್ ಕುಂಬಳೆ ಪ್ರೆಸ್ ಪೋರಂನಲ್ಲಿ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದಾರೆ.
ಬಾಯಾರು ಪಾದೆಕಲ್ಲಿನಿಂದ ತಮಿಳುನಾಡಿನ ಸಿಮೆಂಟ್ ಕಾರ್ಖಾನೆಗಳಿಗೆ ಅಕ್ರಮವಾಗಿ ಮಣ್ಣನ್ನು ಸಾಗಿಸಲಾಗುತ್ತಿದೆ. ಕುಂಬಳೆ ಅನಂತಪುರದಿAದ ಮಣ್ಣು ಮತ್ತು ಕೆಂಪು ಕಲ್ಲುಗಳನ್ನು ಸಾಗಿಸಲಾಗುತ್ತಿದೆ. ಇದರ ವಿರುದ್ಧ ಕೇಶವ ನಾಯಕ್ ಕೇಂದ್ರ ಮತ್ತು ರಾಜ್ಯ ಸಚಿವರು, ಉನ್ನತ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ತನಿಖೆ ನಡೆಸಲಾಯಿತು. ಇದರಿಂದ ಕೆರಳಿದ ಮಾಫಿಯಾಗಳು ಕೇಶವ ನಾಯಕ್ ವಿರುದ್ಧ ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ದ್ದಾರೆ. ಕೆಲವರು ತನ್ನ ಮನೆಗೆ ಬಂದು ಹಣ ನೀಡುವ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದ್ದು, ತಾನು ಮಣಿಯದಿದ್ದಾಗ, ಅವರು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಕೇಶವ ನಾಯಕ್ ಆರೋಪಿಸಿದ್ದಾರೆ.
